ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸೋದ್ಯಮ ತಾಣಗಳಾದ ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿ ಕೈಮರದ ವರೆಗೆ ರೋಪ್ ವೇ ನಿರ್ಮಾಣ ಮಾಡಲಾಗುವುದು ಎಂದು ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಉಳಿದಂತೆ ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ವಾಯುಯಾನ ಹಾಗೂ ಜಲಸಾಹಸ ಯೋಜನೆ ಅನುಷ್ಠಾನ, ಸೀ ಪ್ಲೇನ್, ಹೆಲಿಕಾಪ್ಟರ್, ಜಾಯ್ ರೈಡ್, ರಿವರ್ ಕ್ರೂಸ್ಗೆ ಪ್ರೋತ್ಸಾಹ, ಟ್ಯಾಕ್ಸಿ ಹಾಗೂ ಆಟೋ ಚಾಲಕರು, ಪೊಲೀಸರಿಗೆ ಕೌಶಲ್ಯ ತರಬೇತಿ ಯೋಜನೆಗಳನ್ನು ಘೋಷಿಸಲಾಗಿದೆ.