ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿದ್ದಾರೆ. ರೈತ ಮುಖಂಡರು ಮತ್ತು ನಾಗರಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿದ ಡಿ.ಕೆ. ಶಿವಕುಮಾರ್ ಅವರು, ಸಾರ್ವಜನಿಕರ ದೂರು ಹಾಗೂ ಮನವಿಗಳಿಗೆ ಶೀಘ್ರವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.