ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡಲಸಂಗಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು. ಹಣೆಗೆ ವಿಭೂತಿ ಧರಿಸಿ ದರ್ಶನ ಪಡೆದ ಬಳಿಕ, ಸಂಗಮನಾಥ ದೇವಸ್ಥಾನದ ಎದುರು ಸಚಿವ ವಿಜಯಾನಂದ ಕಾಶಪ್ಪನವರ್ ಸಿಎಂ ಅವರಿಗೆ ಬೆಳ್ಳಿ ಗದೆ ನೀಡಿ ಸನ್ಮಾನಿಸಿದರು.