ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿ ಬಂದ್ ಆಗಿದೆ. ಎಂದಿನಂತೆ ಇದ್ದ ಭದ್ರತೆ ಮತ್ತು ಜನರ ಓಡಾಟ ಕಚೇರಿ ಮುಂದೆ ಕಂಡುಬರುತ್ತಿಲ್ಲ. ಕರ್ನಾಟಕದ ರಾಜಕೀಯ ಬೆಳವಣಿಗೆಗಳು, ಅಧಿಕಾರ ಹಂಚಿಕೆ ಮತ್ತು ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಮಧ್ಯೆ ಈ ಬೆಳವಣಿಗೆ ಮಹತ್ವ ಪಡೆದಿದೆ.