ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾದ ವಿವೇಕ್ ಕುಟುಂಬಕ್ಕೆ ಸರ್ಕಾರದಿಂದ ಒಟ್ಟು 16 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಸಚಿವ ಹೆಚ್.ಸಿ. ಮಹದೇವಪ್ಪ ಅವರು ಈ ಘಟನೆಯನ್ನು ಅತ್ಯಂತ ಅಮಾನವೀಯ ಮತ್ತು ಮೃಗೀಯ ಕೃತ್ಯ ಎಂದು ಖಂಡಿಸಿದ್ದಾರೆ. ಇಂತಹ ಮರ್ಯಾದೆ ಹತ್ಯೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.