ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ಕೂಡಲೇ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.