ಕಸ್ತೂರಿ ರಂಗನ್ ವರದಿ ಅನುಷ್ಠಾನ ಹಾಗೂ ಬರಗಾಲದ ವಿಚಾರವಾಘಿ ಕರೆಯಲಾಗಿರುವ ಮೂರು ದಿನಗಳ ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ, ವಂದೇ ಮಾತರಂ ಹಾಡುವ ವಿಚಾರವಾಗಿ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹಾಗೂ ಪ್ರತಿಪಕ್ಷ ನಾಯಕ ಛಲವಾದಿ ನಾರಯಣಸ್ವಾಮಿ ನಡುವೆ ತೀವ್ರ ವಾಕ್ಸಮರ ನಡೆಯಿತು.