ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಮಾತನಾಡಿದ್ದಾರೆ. ಬಡವರಿಗಾಗಿ ಜಾರಿಯಾದ ಉಚಿತ ಬಸ್, ಕರೆಂಟ್ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಶ್ರೀಮಂತರೂ ಪಡೆಯುತ್ತಿದ್ದಾರೆ. ಮೂರು ವರ್ಷಗಳ ನಂತರ ಈ ಯೋಜನೆಗಳನ್ನು ಪರಿಷ್ಕರಿಸಬೇಕು ಎಂದು ಹೇಳಿರುವ ಅವರು, ಬಜೆಟ್ನಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಬಹುದು ಎಂದು ಸುಳಿವು ನೀಡಿದ್ದಾರೆ.