ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಹೈಕಮಾಂಡ್ ಸೂಚನೆಯಂತೆ ನಾಯಕತ್ವ ಬದಲಾವಣೆ ಪ್ರಕ್ರಿಯೆ ಚುರುಕಾಗಿದ್ದು, ರಾಜಭವನದಲ್ಲಿ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಹಸ್ತಾಂತರಿಸಿದ್ದಾರೆ. ಇತ್ತ ಮನೆ ಬಳಿ ಕಾಯುತ್ತಿದ್ದ ಅಬಿಮಾನಿಗಳು ಮತ್ತು ಬೆಂಬಲಿಗರಿಗೆ ಡಿಕೆಶಿ ಕೈಮುಗಿದ ದೃಶ್ಯ ಕಂಡುಬಂದಿದೆ.