ಬೆಂಗಳೂರಿನ ವಿಜಯನಗರದ ಬಂಟರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಯುಟಿ ಖಾದರ್, 2028ರಲ್ಲಿಯೂ ಡಿಕೆ ಶಿವಕುಮಾರ್ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು. ತುಳುನಾಡಿನ ಜನ ಉಪಕಾರ ಮಾಡಿದವರನ್ನು ಮರೆಯುವುದಿಲ್ಲ. ಅವರು ಮನಸು ಮಾಡಿದರೆ ಏನನ್ನೂ ಸಾಧಿಸುತ್ತಾರೆ. ಸಿಎಂ ಕರಾವಳಿಯಲ್ಲಿ ಸಂಪುಟ ಸಭೆ ನಡೆಸಿ ಮಾಡಿದ ಘೋಷಣೆಗಳ ಅನುಷ್ಠಾನಕ್ಕೆ ಅವರು ಸಾಥ್ ನೀಡಲಿದ್ದಾರೆ ಎಂದರು.