ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಹಾಗೂ ಸಕ್ಕರೆ ಉದ್ಯಮದ ಸುಧಾರಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಕೇಂದ್ರ ಸಮಿತಿಗೆ ಪ್ರಸ್ತಾವನೆ ಸಲ್ಲಿಸಿದೆ. ಪ್ರೊ. ರಮೇಶ್ ಚಂದ್ ನೇತೃತ್ವದ ಸಮಿತಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಈ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದ್ದಾರೆ. ಇದರಿಂದ ಕಬ್ಬು ಬೆಳೆಗಾರರ ಬಹುದಿನಗಳ ಬೇಡಿಕೆಗಳಿಗೆ ಪರಿಹಾರ ಸಿಗುವ ನಿರೀಕ್ಷೆ ಇದೆ.