ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಇರಲಿದೆ. ಇಂದು ರಾಜ್ಯದ ಒಟ್ಟು 8 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.