ಕರ್ನಾಟಕದಾದ್ಯಂತ ಮುಂದಿನ 5 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನು ಉತ್ತರ ಒಳನಾಡು ಪ್ರದೇಶಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಮುನ್ಸೂಚನೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.