ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಕಾರ್ಯವನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಒಟ್ಟು 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಈ ಪೈಕಿ, ಪ್ರಸ್ತುತ ಬಿಪಿಎಲ್ ಕಾರ್ಡ್ ಹೊಂದಿರುವ 4,32,295 ಜನರನ್ನು ಎಪಿಎಲ್ (APL) ವಿಭಾಗಕ್ಕೆ ವರ್ಗಾಯಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.