ಕಾರವಾರದ ಕಡಲತೀರಗಳಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅರಬ್ಬೀ ಸಮುದ್ರದಲ್ಲಿ 45-55 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಜಿಲ್ಲಾಡಳಿತವು ಕೆಂಪು ಬಾವುಟ ನೆಟ್ಟು ರೆಡ್ ಜೋನ್ ಗುರುತಿಸಿದೆ. ಪ್ರವಾಸಿಗರ ಸುರಕ್ಷತೆಗಾಗಿ ಲೈಫ್ ಗಾರ್ಡ್ಗಳನ್ನು ನಿಯೋಜಿಸಲಾಗಿದ್ದರೂ, ಕೆಲವರು ಮುನ್ನೆಚ್ಚರಿಕೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ.