ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗದ್ದಲ ಉಂಟಾಯಿತು. ಸಂಸದ ಡಾ. ಕೆ. ಸುಧಾಕರ್ ಬೆಂಬಲಿಗರಿಂದ ಶಾಸಕರನ್ನು ವೇದಿಕೆಯಿಂದ ಹೊರಕಳಿಸುವಂತೆ ಆಗ್ರಹಿಸಲಾಯಿತು.