ಕೋಲಾರ ಜಿಲ್ಲೆ ಕೆಜಿಎಫ್ ನಗರದಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಸ್ಪಿ ಶಿವಾಂಶು ರಜಪೂತ್ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರೋರಾತ್ರಿ ಆ್ಯಂಡರ್ಸನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿರುವ ರೌಡಿಶೀಟರ್ಗಳು ಮತ್ತು ಮನೆಗಳ್ಳರ ಮನೆಗಳಿಗೆ ಭೇಟಿ ನೀಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಂತಿಯಿಂದ ಬದುಕುವಂತೆ ಮತ್ತು ಅಕ್ರಮ ಚಟುವಟಿಕೆಗಳಿಂದ ದೂರವಿರುವಂತೆ ಸೂಚಿಸಿದ ಅವರು, ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಪೊಲೀಸರಿಗೆ ತಿಳಿಸುವಂತೆ ಸೂಚಿಸಿದ್ದಾರೆ.