ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸೆಕ್ಯೂರಿಟಿ ಚೆಕ್ ಪಾಯಿಂಟ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಮುಂದಿದ್ದ ಕಾರು ದಿಢೀರ್ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿದ್ದರೂ, ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.