ಕೋಗಿಲು ಪ್ರದೇಶದಲ್ಲಿ ಸರ್ಕಾರಿ ಒತ್ತುವರಿ ತೆರವು ಕಾರ್ಯಾಚರಣೆಯ ನಂತರ ನೂರಾರು ನಿವಾಸಿಗಳು ಕಳೆದ ಹತ್ತು ದಿನಗಳಿಂದ ಬೀದಿಗೆ ಬಿದ್ದಿದ್ದಾರೆ. ಮೈ ಕೊರೆಯುವ ಚಳಿಯಲ್ಲಿ, ಪುಟ್ಟ ಮಕ್ಕಳೊಂದಿಗೆ ಆಹಾರ ಮತ್ತು ನೀರಿಲ್ಲದೆ ಪರದಾಡುತ್ತಿದ್ದಾರೆ. ರಾಜ್ಯ ಸರ್ಕಾರ ವಸತಿ ಕಲ್ಪಿಸುವ ಭರವಸೆ ನೀಡಿದ್ದರೂ, ಮನೆ ಅಥವಾ ನಿವೇಶನ ದೊರೆಯುವವರೆಗೂ ಸ್ಥಳಾಂತರಗೊಳ್ಳುವುದಿಲ್ಲ ಎಂದು ನಿವಾಸಿಗಳು ಪಟ್ಟು ಹಿಡಿದಿದ್ದಾರೆ.