33 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ರಾಯಲ್ಪಾಡು ಪೊಲೀಸರು ಬಂಧಿಸಿದ್ದಾರೆ. ಹೊಸಕೋಟೆ ತಾಲ್ಲೂಕು ಮೇಡಿಮಲ್ಲಸಂದ್ರ ಗ್ರಾಮದ ಅಮಾನುಲ್ಲಾ ಬಂಧಿತ ಆರೋಪಿ. 1993ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.