ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅರಿಕೇರೆ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ನಲ್ಲಿ ತೆರಳುತ್ತಿದ್ದ ಇಬ್ಬರು ಸ್ನೇಹಿತರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ತಿಮ್ಮಸಂದ್ರದ ನಿವಾಸಿ ಶಶಿ (25) ಮತ್ತು ನೆಲಮಂಗಲದ ನಿವಾಸಿ ತನುಷ್ (25) ಎಂದು ಗುರುತಿಸಲಾಗಿದೆ. ಈ ಇಬ್ಬರು ಸ್ನೇಹಿತರು ಕೈವಾರದ ದೇವಾಲಯಕ್ಕೆ ಬುಲೆಟ್ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.