ಕೊಪ್ಪಳದ ಹಮಾಲರ ಕಾಲೋನಿಯಲ್ಲಿ ಆರು ವರ್ಷದ ಮೊಹ್ಮದ್ ಹ್ಯಾರಿಸ್ ಮೊದಲ ಮಹಡಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಾರಿವಾಳ ಬೆನ್ನಟ್ಟುವಾಗ ಸಂಭವಿಸಿದ ಈ ಘಟನೆಯಲ್ಲಿ ಮಗುವಿಗೆ ತಲೆಗೆ ಪೆಟ್ಟಾಗಿದ್ದು, ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದೆ.