ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹುಲಿಯಾಪುರ ತಾಂಡಾ ಬಳಿ ಕಾಡು ಹಂದಿ ಮೇಲೆ ಚಿರತೆ ದಾಳಿ ಮಾಡಿದ್ದು, ಅರಣ್ಯಾಧಿಕಾರಿಗಳು ಚಿರತೆ ಸೆರೆ ಹಿಡಿಯಲು ಮುಂದಾಗಿದ್ದಾರೆ. ಗ್ರಾಮಸ್ಥರು ರಾತ್ರಿ ವೇಳೆ ಒಂಟಿಯಾಗಿ ಓಡಾಡದಂತೆ ಹಾಗೂ ಮಕ್ಕಳನ್ನು ಹೊರಗೆ ಬಿಡದಂತೆ ಎಚ್ಚರಿಕೆ ನೀಡಲಾಗಿದೆ. ಇತರೆ ಗ್ರಾಮಗಳಲ್ಲಿ ಕರಡಿ, ಚಿರತೆ ಕಾಣಿಸಿಕೊಂಡಿದ್ದು, ವನ್ಯಜೀವಿಗಳು ಆಹಾರ ಅರಸಿ ನಾಡಿಗೆ ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.