ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದಲ್ಲಿ ಸಾರ್ವಜನಿಕರನ್ನು ಆತಂಕಕ್ಕೆ ತಳ್ಳಿದ್ದ ಚಿರತೆಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಕಳೆದ ಹಲವು ದಿನಗಳಿಂದ ಗ್ರಾಮಸ್ಥರಿಗೆ ನಿದ್ದೆಗೆಡಿಸಿದ್ದ ಈ ಚಿರತೆ ಸೆರೆಯಾದ ನಂತರ, ಸುತ್ತಮುತ್ತಲಿನ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿ, ನಂತರ ದಟ್ಟ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಿದ್ದಾರೆ.