ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಯಿಂದ ರೈತ ರಾಮೇಗೌಡ ತಮ್ಮ 10 ಎಕರೆ ರಾಗಿ ಬೆಳೆ ಕಳೆದುಕೊಂಡಿದ್ದಾರೆ. ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದು, ಜಾನುವಾರುಗಳ ಮೇವಿಗೂ ಸಮಸ್ಯೆ ಎದುರಾಗಿದೆ. ಶಾಸಕ ರವಿಶಂಕರ್ ಮೂಲಕ ಸರಕಾರದಿಂದ ಪರಿಹಾರಕ್ಕಾಗಿ ರೈತರು ಮನವಿ ಮಾಡಿದ್ದಾರೆ.