ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರ ಮತ್ತು ಬೆಳಗಾವಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿ ಉಕ್ಕಿ ಹರಿಯುತ್ತಿದೆ. ಯಡೂರು ಮತ್ತು ಕಲ್ಲೋಳ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. ಇದು ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕ ಮೂಡಿಸಿದೆ.