ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿದ್ದು, ಮಂಡ್ಯ ಜಿಲ್ಲೆಯ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಏರಿಕೆ ಕಂಡಿದೆ. ಕೇವಲ 2 ದಿನಗಳಲ್ಲಿ 5 ಅಡಿ ನೀರು ಏರಿಕೆಗೊಂಡು ಸದ್ಯ 97 ಅಡಿ ತಲುಪಿದೆ. ಜಲಾಶಯಕ್ಕೆ 22,055 ಕ್ಯೂಸೆಕ್ ಒಳಹರಿವಿದ್ದು, 1,766 ಕ್ಯೂಸೆಕ್ ನೀರು ಹೊರಹರಿವು ಇದೆ.