ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ನಲ್ಲಿ ಕೆಎಸ್ಆರ್ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಭೀಕರ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯಿಂದ ಬರುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಬೈಕ್ಗಳು ಮತ್ತು ಸಾರ್ವಜನಿಕರಿಗೆ ಗುದ್ದಿದೆ. ಅದೃಷ್ಟವಶಾತ್ ಪೆಟ್ರೋಲ್ ಬಂಕ್ಗೆ ನುಗ್ಗುವ ಮುನ್ನ ನಿಂತಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಈ ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.