ಯೂಟರ್ನ್ ಪಡೆಯುತ್ತಿದ್ದ ಕ್ಯಾಂಟರ್ಗೆ KSRTC ಬಸ್ ಡಿಕ್ಕಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿಯ ಬ್ಯಾಂಕ್ ಸರ್ಕಲ್ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಜಖಂ ಆಗಿದ್ದು, ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕಸೇರಿದಂತೆ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.