ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.