ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಐದಾರು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್, ಬಸ್ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಗುಬ್ಬಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.