ಮೃತರ ಕುಟುಂಬಕ್ಕೆ 32 ಲಕ್ಷ ಪರಿಹಾರ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಅನ್ನು ಚನ್ನರಾಯಪಟ್ಟಣದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. 2023ರಲ್ಲಿ ಸಂಭವಿಸಿದ ಅಪಘಾತದಲ್ಲಿ ರೇಣುಕಪ್ಪ ಮತ್ತು ರವಿಕಿರಣ್ ಮೃತಪಟ್ಟಿದ್ದರು. ಮೋಟಾರ್ ವಾಹನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಪರಿಹಾರ ನೀಡುವಂತೆ ಆದೇಶಿಸಿತ್ತು ಎನ್ನಲಾಗಿದೆ. ಇನ್ನು ಈ ಘಟನೆಯು ಪ್ರಯಾಣಿಕರಿಗೆ ತೊಂದರೆ ಉಂಟುಮಾಡಿದ್ದು, ವಾಹನ ಸಿಬ್ಬಂದಿ ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿಯೂ ನಡೆದಿದೆ.