ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿಯಲ್ಲಿ ನಡೆದ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಈ ವೇಳೆ ಅವರು ತಮ್ಮ ಸಹೋದರ ಚನ್ನರಾಜ್ ಅವರ ಮಗನಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಮಹತ್ವವನ್ನು ಈ ಕಾರ್ಯಕ್ರಮ ಸಾರಿತು.