ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಯ ಪ್ರಗತಿಯ ಕುರಿತು ಮಾಹಿತಿ ನೀಡಿದ್ದಾರೆ. ರಾಜ್ಯದ ಗೃಹಲಕ್ಷ್ಮೀಯರಿಗೆ ಈವರೆಗೂ 26 ಕಂತುಗಳಲ್ಲಿ ಒಟ್ಟು 52,000 ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಪ್ರತಿ ಫಲಾನುಭವಿಗೂ ಈ ಆರ್ಥಿಕ ನೆರವು ತಲುಪಿದೆ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.