ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಗ್ರಾಮದ ಜಮೀನಿನಲ್ಲಿ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಜಮೀನುಗಳಲ್ಲಿ ಕೆಲಸ ಮಾಡಲು ತೆರಳುವ ರೈತರು ಭಯಭೀತರಾಗಿದ್ದು, ತಾಯಿ ಚಿರತೆಯು ಸುತ್ತಮುತ್ತಲೇ ಇರುವ ಸಾಧ್ಯತೆಯಿರುವುದರಿಂದ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.