ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ಚಿರತೆ ಮರಿಗಳು ಪತ್ತೆಯಾಗಿವೆ. ರೈತ ನಾಗಪ್ಪ ಎಂಬುವವರು ತಮ್ಮ ಜಮೀನಿಗೆ ನೀರು ಹಾಯಿಸಲು ಹೋದಾಗ ಈ ಮರಿಗಳು ಕಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಮರಿಗಳನ್ನು ಸುರಕ್ಷಿತವಾಗಿ ರಕ್ಷಿಸಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.