ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದೆ. ಭತ್ತದ ಜಮೀನಿನಲ್ಲಿ ಚಿರತೆ ಓಡಾಡುತ್ತಿದ್ದು, ಈ ದೃಶ್ಯ ವ್ಯಕ್ತಿಯೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದೆ. ಇನ್ನು ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.