ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕಪ್ಪತಗುಡ್ಡ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಡೋಣಿ ತಾಂಡಾ ಹಾಗೂ ಗ್ವಾಲಗೇರಿ ಮಠದ ಮಾರ್ಗ ಮಧ್ಯೆ ಚಿರತೆ ಓಡಾಟ ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ರಸ್ತೆಯಲ್ಲಿ ಚಿರತೆ ಓಡಾಡುತ್ತಿರುವುದರಿಂದ ರೈತರು ಜಮೀನಿಗೆ ತೆರಳಲು ಭಯಪಡುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರು ಚಿರತೆ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.