ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ಹಾಡಹಗಲೇ ಮನೆ ಬಾಗಿಲಿಗೇ ಚಿರತೆ ಬಂದಿದೆ. ಇದು ಕಳೆದ ವಾರದಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸುತ್ತಿದ್ದು, ಚಿರತೆಯ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.