ಚಾರ್ಮಾಡಿ ಘಾಟಿಯಲ್ಲಿ ಇತ್ತೀಚೆಗೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಸಂಪರ್ಕಿಸುವ ಈ ರಸ್ತೆಯ ತಡೆಗೋಡೆ ಬಳಿ ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಈ ಘಾಟಿಯಲ್ಲಿ ನಿತ್ಯವೂ ನೂರಾರು ವಾಹನಗಳು ಸಂಚರಿಸುತ್ತವೆ. ಪ್ರವಾಸಿಗರು ಫೋಟೋ ಮತ್ತು ರೀಲ್ಸ್ ಮಾಡಲು ವಾಹನಗಳಿಂದ ಇಳಿಯುತ್ತಿರುವುದು ಅಪಾಯಕಾರಿಯಾಗಿದೆ. ಆದ್ದರಿಂದ ಸಾರ್ವಜನಿಕರು ಘಾಟಿ ರಸ್ತೆಯಲ್ಲಿ ವಾಹನದಿಂದ ಇಳಿಯುವ ಮುನ್ನ ಎಚ್ಚರ ವಹಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.