ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕನ್ನಾಯಕನಹಳ್ಳಿ ಗ್ರಾಮದ ರಸ್ತೆ ಮಧ್ಯದಲ್ಲೇ ದೈತ್ಯ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ಕಾಡಿನಿಂದ ನಾಡಿಗೆ ಬಂದ ಈ ಚಿರತೆಯ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಯಾವುದೇ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ತಕ್ಷಣವೇ ಬೋನು ಇಟ್ಟು ಚಿರತೆಯನ್ನು ಸೆರೆಹಿಡಿಯಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.