ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ದಾಸಿಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಸ್ಥಳೀಯ ರಾಜಣ್ಣ ಎಂಬುವರ ಮೇಕೆಯನ್ನು ಕೊಂದು ತಿಂದಿದ್ದ ಚಿರತೆಯನ್ನು ಸೆರೆಹಿಡಿಯಲಾಗಿದ್ದು, ದಾಸಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ