ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆಯು ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದು ಸೆರೆಯಾಗಿದೆ. ಗ್ರಾಮಸ್ಥರ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು ಚಿರತೆಯನ್ನು ಯಶಸ್ವಿಯಾಗಿ ಲಾಕ್ ಮಾಡಿದ್ದು, ಆತಂಕ ದೂರವಾದ ಹಿನ್ನೆಲೆಯಲ್ಲಿ ನಿಟ್ಟುಸಿರು ಬಿಟ್ಟಿರುವ ಸ್ಥಳೀಯರು ಚಿರತೆ ನೋಡಲು ಮುಗಿಬಿದ್ದಿದ್ದಾರೆ.