ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಮಳಗಾಳು ಗ್ರಾಮದಲ್ಲಿ ಕುರಿ, ಮೇಕೆಗಳನ್ನ ಬೇಟೆಯಾಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ನಾಲ್ಕು ದಿನಗಳ ಹಿಂದೆ ಶೆಡ್ ನುಗ್ಗಿ ಕುರಿಗಳನ್ನು ತಿಂದು ಹಾಕಿದ್ದ ಈ ಚಿರತೆಯನ್ನು ಹಿಡಿಯಲು ಅರಣ್ಯ ಸಿಬ್ಬಂದಿ ಬೋನು ಇರಿಸಿದ್ದರು. ಆಹಾರ ಅರಸಿ ಬಂದು ಸಿಕ್ಕಿಬಿದ್ದ ಚಿರತೆಯನ್ನು ನೋಡಲು ಅಧಿಕಾರಿಗಳು ಭೇಟಿ ನೀಡಿದ್ದು, ಗ್ರಾಮಸ್ಥರಲ್ಲಿ ಆತಂಕ ನಿವಾರಣೆಯಾಗಿದೆ.