ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಚಿಕ್ಕಳಲೆ ಗ್ರಾಮದಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡಿ ಉಪಟಳ ನೀಡ್ತಿದ್ದ ಚಿರತೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಬೋನಿಗೆ ಕಟ್ಟಿದ್ದ ನಾಯಿ ತಿನ್ನಲು ಬಂದ ಚಿರತೆ,ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಕಳೆದ ಎರಡು ವರ್ಷಗಳಿಂದ ಜಾನುವಾರುಗಳ ಮೇಲೆ ದಾಳಿ ಮಾಡ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರಿಂದ ತೀವ್ರ ಒತ್ತಾಯದ ಹಿನ್ನಲೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು.