ಬಳ್ಳಾರಿ ಜಿಲ್ಲೆ ಸಂಡೂರಿನ ಕುಮಾರಸ್ವಾಮಿ ದೇಗುಲದ ಬಳಿ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ 16 ಚಕ್ರದ ಲಾರಿಯೊಂದು ಸಂಪೂರ್ಣ ಸುಟ್ಟು ಕರಕಲಾಗಿದೆ. ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದ್ದು, ಲಾರಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.