ಬೆಂಗಳೂರು ದಕ್ಷಿಣ ಜಿಲ್ಲೆ, ಮಾಗಡಿ ತಾಲೂಕಿನ ಬಿಳಿಗುಂಬ ಗ್ರಾಮದ ಹೊರವಲಯದ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಮಾಗಡಿಯಿಂದ ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಗ್ರಾಮಸ್ಥರು ಇದನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಈ ಘಟನೆ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ಚಿರತೆಯನ್ನು ತಕ್ಷಣ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.