ಮಾಘ ಹುಣ್ಣಿಮೆ ಹಿನ್ನೆಲೆ ಟಿ ನರಸೀಪುರ ತಾಲ್ಲೂಕಿನಲ್ಲಿರುವ ತ್ರಿವೇಣಿ ಸಂಗಮದಲ್ಲಿ ಸಾವಿರಾರು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಪುಣ್ಯಸ್ನಾನದ ಬಳಿಕ ಗುಂಜಾನರಸಿಂಹಸ್ವಾಮಿ ದರ್ಶನ ಮಾಡಿ ಪುನೀತರಾಗಿದ್ದಾರೆ. ಯಾವುದೇ ಅಹಿತಕರ ಘಟನೆ ಜರುಗದಂತೆ ಪೊಲೀಸರು ಮುಂಜಾಗೃತಾ ಕ್ರಮ ಕೈಗೊಂಡಿದ್ದು, ನದಿ ಮತ್ತು ದೇವಸ್ತಾನದ ಬಳಿ ಸಿಬ್ಬಂದಿ ನಿಯೋಜಿಸಲಾಗಿತ್ತು.