ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಾಲೇನಹಳ್ಳಿ ಬಳಿ ಮಂತ್ರಾಲಯದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಥಾರ್ ಜೀಪೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಕ್ಲಚ್ ಸಮಸ್ಯೆ ಕಾರಣಕ್ಕೆ ರಸ್ತೆ ಬದಿ ಜೀಪ್ ನಿಲ್ಲಿಸಿ ಬಾನೆಟ್ ನೋಡುವಷ್ಟರಲ್ಲಿ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.