ಖಮ್ಮಂನಿಂದ ವಿಶಾಖಪಟ್ಟಣಂಗೆ ಹೋಗುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ಕೊವ್ವೂರ್ ಫ್ಲೈಓವರ್ನಲ್ಲಿ ಹೊತ್ತಿ ಉರಿದಿರುವ ಘಟನೆ ವರದಿಯಾಗಿದೆ. ಸೆಲ್ಫ್ ಮೋಟಾರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಚಾಲಕ ಎಚ್ಚರಗೊಂಡು ಬಸ್ ನಿಲ್ಲಿಸಿದ್ದಾರೆ. ಆರು ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಸುರಕ್ಷಿತವಾಗಿ ಪಾರಾಗಿದ್ದಾರೆ.